Latest

*ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರ ನಿಷೇಧ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಹಲವೆಡೆ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಹಾಗೂ ಭಾರಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

Home add -Advt

ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ.

ಜೂನ್ 27ರಿಂದ ಸೆಪ್ಟೆಂಬರ್ 15ರವರೆಗೆ ಆಗುಂಬೆ ಘಾಟ್ ನಲ್ಲಿ ಭಾರಿ ವಾಹನಗಳನ್ನು ನಿಷೇಧಿಸಲಾಗಿದೆ. ನಿರಂತರ ಮಳೆಯಿಂದಾಗಿ ಈ ಭಾಗದಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಸರಕು ಸಾಗಣೆಯ ಬೃಹತ್ ವಾಹನಗಳು ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಅನುಸರಿಸಬೇಕು. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದ ಬದಲಾಗಿ ತೀರ್ಥಹಳ್ಳಿ, ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ, ಉಡುಪಿ ಮಾರ್ಗವಾಗಿ ಸಂಚರಿಸಲು ಸೂಚಿಸಲಾಗಿದೆ.


Related Articles

Back to top button