Kannada NewsKarnataka News

*ಮಾನಸ ಸರೋವರ, ಚಾರ್ ಧಾಮ್, ಕಾಶಿ ಯಾತ್ರಿಕರಿಗೆ ಸಹಾಯ ಧನ ಪ್ರಕಟಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಹಾಗೂ ಚಾರ್ ಧಾಮ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ರಾಜ್ಯದಿಂದ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು, ಚಾರ್ ಧಾಮ್ ಯಾತ್ರಾರ್ಥಿಗಳು ಹಾಗೂ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸಾಹಾಯಧನ ನೀಡುವಂತೆ ಸಿಎಂ ಸಿದ್ದರಾಮಯ್ಯ ಮುಜರಾಯಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ರಾಜ್ಯದಿಂದ ಕೈಲಾಸ ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 30 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಚಾರ್ ಧಾಮ್ ಯಾತ್ರಾರ್ಥಿಗಳಿಗಳಿಗೆ ತಲಾ 20 ಸಾವಿರ ಹಾಗೂ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ ತಲಾ 5 ಸಾವಿರ ಸಹಾಯಧನ ಪಾವತಿಸಲು ಸರ್ಕಾರ ಸೂಚಿಸಿದೆ.

ಮಾನಸ ಸರೋವರ ಯತರಿಕರಿಗೆ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಿದೆ.

  • ಮಾನಸ ಸರೋವರ ಯಾತ್ರೆ ಕೈಗೊಳ್ಳುವ ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಸಹಾಯಧನ ಪಡೆದುಕೊಳ್ಳಬಹುದು.
  • ಯತರಿಕರು ಸಹಾಯಧನ ಪಡೆಯಲು ಇಚ್ಛಿಸಿದರೆ ಆಯಾ ಆರ್ಥಿಕ ಸಾಲಿನಲ್ಲಿ ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ನಿಗದಿಪಡಿಸಿದ ದಿನಾಂಕದೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. 25 ರೂಪಾಯಿ ಪಾವತಿಸಿ ವೆಬ್ ಸೈಟ್ ಅಥವಾ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
  • ಯಾತ್ರೆಯನ್ನು ಕೈಗೊಳ್ಳುವ ಬಗ್ಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲುಸುವ ಮತ್ತು ಸದರಿ ಅರ್ಜಿಯ ಬಗ್ಗೆ ಸಂಬಂಧಿಸಿದ ಪ್ರಕ್ರಿಯೆಗಳಿಗೆ ತಗುಲುವ ಸಂಪೂರ್ಣ ವೆಚ್ಚ ಹಾಗೂ ಚೀನಾ ದೇಶಕ್ಕೆ ಪಾವತಿಸಬೇಕಾದ ಮೊತ್ತವನ್ನು ಸಂಬಂಧಪಟ್ಟ ಯಾತ್ರಾರ್ಥಿಗಳೇ ಭರಿಸಬೇಕು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button