Belagavi NewsBelgaum NewsKannada NewsKarnataka News

*ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ*

ಪ್ರಗತಿವಾಹಿನಿ‌ ಸುದ್ದಿ: ರಾಜ್ಯಾದ್ಯಂದ ಮಳೆ ಚೆನ್ನಾಗಿ ಆಗುತ್ತಿದ್ದು, ಕೆಲವೆಡೆ ಹಲವು ಅವಘಡಗಳು ಸಂಭವಿಸಿದೆ. ಇದರ ಬೆನ್ನಲ್ಲೇ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಕರಾವಳಿ ಮತ್ತು ಮಧ್ಯ ಕರ್ನಾಟಕದಲ್ಲಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ,ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಐಎಂಡಿ ತಿಳಿಸಿದೆ.ಸಾಧ್ಯವಾದರೆ ಮನೆಯೊಳಗೆ ಇರಿ, ಪ್ರಯಾಣ ತಪ್ಪಿಸಿ. ಮರಗಳ ಕೆಳಗಡೆ ಆಶ್ರಯ ಪಡೆಯಬೇಡಿ ಎಂದು ಐಎಂಡಿ ಸೂಚನೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button