ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಈಗಾಗಲೇ ಅನೇಕ ಅವಾಂತರಗಳು ಸೃಷ್ಟಿಯಾಗಿದೆ. ಸತತ ಮಳೆಯಿಂದ ಹೊಸದಾಗಿ ನಿರ್ಮಿಸಿದ ರಸ್ತೆಯಲ್ಲಿ ಬಿರುಕು ಬಿಟ್ಟಿದ್ದು ಜನ ಭಯಭೀತರಾಗಿದ್ದಾರೆ.
ಬೆಳಗಾವಿ ನಗರದಿಂದ ಬೆಳಗಾವಿ ತಾಲೂಕಿನ ಸಾವಗಾಂವ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ವೈಟ್ ಟೈಪಿಂಗ್ ( ಕಾಂಕ್ರೀಟ್) ರಸ್ತೆಯಲ್ಲಿ ಸುಮಾರು ಅರ್ಧ ಕಿಲೋಮೀಟರ್ ಗಿಂತ ಹೆಚ್ಚು ರಸ್ತೆ ಸಂಪೂರ್ಣ ಬಿರುಕು ಬಿಟ್ಟಿದೆ. ರಸ್ತೆಯಲ್ಲಿ ಬಿರುಕು ಬಿಟ್ಟಿದ್ದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿದ್ದು, ಕಳೆಪೆ ಮಟ್ಟದ ರಸ್ತೆ ಕಾಮಗಾರಿಗೆ ಆಗಿದ್ದರಿಂದ ಒಂದೇ ಮಳೆಗೆ ಅದರ ಅಸಲಿಯತ್ತು ಹೊರ ಬಿದ್ದಿದೆ. ರಸ್ತೆಯಲ್ಲಿ ಭಾರಿ ಬಿರುಕು ಬಿಟ್ಟಿದ್ದರಿಂದ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಪಶ್ಚಿಮ ಘಟದಲ್ಲಿ ಭಾರಿ ಮಳೆ ಆಗುತ್ತಿದ್ದರಿಂದ ಬೆಳಗಾವಿ ಭಾಗದ ನದಿಗಳು ತುಂಬಿ ಹರಿಯುತ್ತಿದೆ. ಜನರಿಗೆ ಜಾಗೃತೆಯಿಂದ ಇರಲು ಸೂಚಿಸಲಾಗಿದೆ. ನಿಷೇಧಿತ ಪ್ರದೇಶದ ಕಡೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ