Latest

*ಉತ್ತರ ಕನ್ನಡದ ಈ ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೆಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಅದರಲ್ಲಿಯೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆ, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಅನೇಕ ಕಡೆಗಳಲ್ಲಿ ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ.

ಜಿಲ್ಲೆಯಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವರುಣಾರ್ಭಟ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಕಾರವಾರ, ಕುಮಟಾ, ಭಟ್ಕಳ ಹಾಗೂ ಹೊನ್ನಾವರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಜಿಲ್ಲೆಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನೆರೆಪೀಡಿತ ಪ್ರದೇಶಗಳ ಜನರಿಗಾಗಿ ಜಿಲ್ಲಾಡಳಿತ ಕಾಳಜಿ ಕೇಂದ್ರಗಳನ್ನು ತೆರೆದಿದೆ. ಮುಂಜಾಗೃತಾ ಕ್ರಮವಾಗಿ ಬೆಂಗಳೂರಿನಿಂದ 35 ಜನರ ಎರಡು ಎನ್ ಡಿ ಆರ್ ಎಫ್ ತಂಡಗಳು ಜಿಲ್ಲೆಗೆ ಆಗಮಿಸಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button