Kannada NewsNational

*ಸೇನೆ ಮತ್ತು ಉಗ್ರರ ನಡುವೆ ಫೈರಿಂಗ್: 5 ಉಗ್ರರ ಎನ್ ಕೌಂಟರ್* 

ಪ್ರಗತಿವಾಹಿನಿ ಸುದ್ದಿ: ಪ್ರತ್ಯೇಕ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಸದೆಬಡಿದಿರುವ ಭಾರತೀಯ ಸೇನೆ ಇಬ್ಬರು ಯೋಧರನ್ನು ಕಳೆದುಕೊಂಡ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ.

ಕುಲ್ಗಾಮ್ ಜಿಲ್ಲೆಯ ಎರಡು ಸ್ಥಳಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಎರಡು ಪ್ರತ್ಯೇಕ ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿತ್ತು. ಭಾರತೀಯ ಸೇನೆ ಕಾರ್ಯಾಚರಣೆ ನಡೆಸುವ ವೇಳೆ ಉಗ್ರರು ಏಕಾಏಕಿ ದಾಳಿ ನಡೆಸಿದ್ದರಿಂದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಮೊಡೆಗ್ರಾಮ್ ನಲ್ಲಿ ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಉಗ್ರರು ಭಾರೀ ಪ್ರಮಾಣದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. 

ಕಾರ್ಯಾಚರಣೆ ವೇಳೆ ಸಿಆರ್ ಪಿಎಫ್ ಯೋಧ ಮೃತಪಟ್ಟಿದ್ದಾರೆ. ಉಗ್ರರು ಸಿಕ್ಕಿ ಹಾಕಿಕೊಳ್ಳುವ ಭೀತಿಯಲ್ಲಿ ದಾಳಿ ನಡೆಸುತ್ತಿರುವುದನ್ನು ಮನಗಂಡ ಭಾರತೀಯ ಸೇನೆ ಪ್ರತಿದಾಳಿ ನಡೆಸಿದ್ದರಿಂದ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ವೇಳೆ ಭದ್ರತಾ ಸಿಬ್ಬಂದಿ ಡ್ರೋಣ್ ಬಳಸಿ ಉಗ್ರರ ಇರುವಿಕೆಯನ್ನು ಪತ್ತೆ ಹಚ್ಚಿದ್ದು, ನಾಲ್ವರು ಉಗ್ರರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಇದೇ ವೇಳೆ ಮತ್ತೊಂದು ಜಾಗದಲ್ಲಿ ಇನ್ನಿಬ್ಬರು ಉಗ್ರರು ಅಡಗಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ.

ಇದೇ ವೇಳೆ ಮತ್ತೊಂದು ಸ್ಥಳದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಭಾನುವಾರ ಮುಂಜಾನೆ ಹತ್ಯೆಗೈಯ್ಯಲಾಗಿದ್ದು, ಕಾರ್ಯಾಚರಣೆಯಲ್ಲಿ ಒಟ್ಟಾರೆ 5 ಉಗ್ರರನ್ನು ಸದೆಬಡಿದಂತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button