ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಡೆಂಗ್ಯೂ ಸೋಂಕು ಹೆಚ್ಚುತ್ತಿದ್ದು, ಮಕ್ಕಳು ಬಲಿಯಾಗುತ್ತಿದ್ದಾರೆ. 5 ವರ್ಷದ ಬಾಲಕನೊಬ್ಬ ಡೆಂಗ್ಯೂ ಸೋಂಕಿಗೆ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ.
ಇದು ಗದಗ ಜಿಲ್ಲೆಯ ಮೊದಲ ಪ್ರಕರಣವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಗದಗ ಜಿಲ್ಲೆಯ ಶಿರಂಜ ಗ್ರಾಮದ 5 ವರ್ಷದ ಬಾಲಕ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆ ಅಗತ್ಯ ಹಿನ್ನೆಲೆಯಲ್ಲಿ ಧರವಾಡದ ಎಸ್ ಡಿಎಂ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಬಾಲಕ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲಿಯೇ ಕೊನೆಯುಸಿರೆಳೆದಿದ್ದಾನೆ.
ರಾಜ್ಯದಲ್ಲಿ ಡೆಂಗ್ಯೂ, ಝೀಕಾ, ಚಿಕೂನ್ ಗುನ್ಯಾ ಸೋಂಕು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತು ರೋಗ ನಿಯಂತ್ರಣಕ್ಕೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ