ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಸೋಂಕುಮಹಾಮಾರಿಯಂತೆ ಹರಡುತ್ತಿದೆ. ಗದಗದಲ್ಲಿ 5 ವರ್ಷದ ಬಾಲಕ ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ಬೆನ್ನಲ್ಲೇ ಹಾಸನದಲ್ಲಿ ಯುವತಿ ಯೊಬ್ಬರು ಡೆಂಗ್ಯೂ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಈವರೆಗೆ ಮೂವರು ಮಕ್ಕಳು ಸೇರಿದಂತೆ 7 ಜನರು ಶಂಕಿತ ಡೆಂಗ್ಯೂ ಸೋಂಕಿಗೆ ಸಾವನ್ನಪ್ಪಿದ್ದಾರೆ. ಈಗ ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 23 ವರ್ಷದ ಯುವತಿ ಕೊನೆಯುಸಿರೆಳೆದಿದ್ದಾರೆ.
ಡೆಂಗ್ಯೂ ಸೋಂಕಿನಿಂದಲೇ ಯುವತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಮುದಡಿ ತಾಂಡಾದ ನಿವಾಸಿ 23 ವರ್ಷದ ಸುಪ್ರಿತಾ ಮೃತ ಯುವತಿ.
ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಬಹು ಅಂಗಾಂಗ ವೈಫಲ್ಯ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ