Latest

*ಕಿಮ್ಸ್ ನಲ್ಲಿ ನಾಲ್ವರು ಡೆಂಗ್ಯೂ ಮಹಾಮಾರಿಯಿಂದ ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 87 ಡೆಂಘೀ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೊನೇ ಕ್ಷಣದಲ್ಲಿ ಬಂದು ಚಿಕಿತ್ಸೆಗೆ ದಾಖಲಾಗಿದ್ದ ನಾಲ್ವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಕಿಮ್ಸ್ ನಿರ್ದೇಶಕರು ಮಾಹಿತಿ ನೀಡಿದ್ದು, ಬೇರೆ ಬೇರೆ ಜಿಲ್ಲೆಯಲ್ಲಿನ ಸೋಂಕಿತರು ಕಿಮ್ಸ್ ಗೆ ಬಂದು ದಾಖಲಾಗುತ್ತಿದ್ದಾರೆ. 87 ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಹುತೇ ಎಲ್ಲರೂ ಗುಣಮುಖರಾಗುತ್ತಿದ್ದಾರೆ. ಡೆಂಗ್ಯೂ ಸೋಂಕು ಉಲ್ಬಣವಾಗಿ ಕೊನೇ ಹಂತದಲ್ಲಿ ದಾಖಲಾಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರು ಬೇರೆ ಬೇರೆ ಜಿಲ್ಲೆಯಿಂದ ಬಂದವರಾಗಿದ್ದಾರೆ. ಜ್ವರದಂತಹ ಲಕ್ಷಣ ಕಂಡುಬಂದ ಕೂಡಲೇ ನಿರ್ಲಕ್ಷ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳಿ, ಸೂಕ್ತ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು. ಹಾಗಾಗಿ ತಕ್ಷಣ ಚಿಕಿತ್ಸೆ ಪಡೆಯುವ ಅಗತ್ಯವಿದೆ ಎಂದಿದ್ದಾರೆ.

Home add -Advt

ಇನ್ನು ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ಪತ್ತೆಯಾಗಿದೆ.


Related Articles

Back to top button