Karnataka News

*ರಾಜ್ಯದ ಈ 10 ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಮಳೆ ಅಬ್ಬರ…!*

ವರುಣಾರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತ

Home add -Advt

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ 10 ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ, ಧಾರವಾಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಗದಗ, ಹಾವೇರಿ, ಕೊಪ್ಪಳ, ಯಾರಚೂರು, ವಿಜಯಪುರ, ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳುರು ನಗರ, ಹಾಸನ, ಕೊಡಗು, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಗೂ ಬೆಳಗಾವಿಯಲ್ಲಿ ವರುಣಾರ್ಭಟ ಮತ್ತಷ್ಟು ಜೋರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅವಾಂತರಗಳು ಸೃಷ್ಟಿಯಾಗಿದ್ದು, ರಸ್ತೆ, ಮನೆಗಳು, ತೋಟ, ಗದ್ದೆಗಳು ಜಲಾವೃತಗೊಂಡಿವೆ. ಹಲವೆಡೆ ಕಾಳಜಿ ಕೇಂದ್ರಗಳಿಗೆ ಗ್ರಾಮಸ್ತರನ್ನು ಸ್ಥಳಾಂತರಿಸಲಾಗಿದೆ.

Related Articles

Back to top button