
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟಕ್ಕೆ ಜನರು ತತ್ತರಗೊಂಡಿದ್ದಾರೆ. ಈ ನಡುವೆ ಹವಾಮಾನ ಇಲಾಖೆ ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ್ದು ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಕರಾವಳಿ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಮಳೆಯಾಗುವ ಸಾಧ್ಯತೆ ಇದೆ. ಟ್ರಫ್ ( ವಾತಾವರಣದಲ್ಲಿ ಗಾಳಿಯ ಚಲನೆಯಿಂದ ಉಂಟಾದ ಸಮಸ್ಯೆ)ನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿಹೆಚ್ಚು ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗಾಳಿಯ ವೇಗ ಗಂಟೆಗೆ40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ರಾಮನಗರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಕೊಡಗು, ಹಾಸನ. ಕೋಲಾರ, ಬಳ್ಳಾರಿ, ಧಾರವಾಡ, ಹಾವೇರಿ, ಹಾಸನ, ಕೊಡಗು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ.