ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಧಾರಾಕಾರವಾಗಿ ಸುರಿದ ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದು, ಮೂರು ಕಾರುಗಳು ಜಖಂಗೊಂಡ ಘಟನೆ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ರಸ್ತೆಯಲ್ಲಿ ನಡೆದಿದೆ.
ಸೋಮವಾರ ಸಂಜೆ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯ ರಸ್ತೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಮರದಡಿ ಸಿಲುಕಿ ಮೂರು ಕಾರುಗಳು ಜಖಂಗೊಂಡಿವೆ. ಅದೃಷ್ಠವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಮರ ಬಿದ್ದು ಜಖಂಗೊಂಡ ಕಾರಣ ಲಕ್ಷಾಂತರ ರೂಪಾಯಿಗಳ ಹಾನಿ ಉಂಟಾಗಿದೆ.
ಮರವನ್ನು ತೆರವುಗೊಳಿಸುವವರೆಗೂ ಮುಖ್ಯರಸ್ತೆಯನ್ನು ಬಂದ್ ಮಾಡಲಾಗಿತ್ತು. ಇದರಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳಕ್ಕಾಗಮಿಸಿದ ಅರಣ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಉರುಳಿಬಿದ್ದ ಬೃಹತ್ ಮರವನ್ನು ತೆರವುಗೊಳಿಸಿ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ