Kannada NewsKarnataka News

ಕೇಂದ್ರದ ಹಲವು ಸಚಿವರ ಭೇಟಿ -ಸಹಕಾರ ಕೋರಿಕೆ

ಕೇಂದ್ರದ ಹಲವು ಸಚಿವರ ಭೇಟಿ -ಸಹಕಾರ ಕೋರಿಕೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ –  ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮತ್ತು ಸಂಸದ ಅಣ್ಣಾ ಸಾಹೇಬ ಜೊಲ್ಲೆ ಇಂದು ನವದೆಹಲಿಯಲ್ಲಿ ಕೇಂದ್ರದ ಹಲವಾರು ಸಚಿವರನ್ನು ಭೇಟಿ ಮಾಡಿ, ಸಹಕಾರ ಕೋರಿದರು.

ಕೇಂದ್ರ ಜವಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ  ಸ್ಮೃತಿ ಇರಾನಿ, ಕೇಂದ್ರ ಸಂಸದೀಯ ವ್ಯವಹಾರ, ಕಲ್ಲಿದ್ದಲು ಹಾಗೂ ಗಣಿ ಖಾತೆಯ ಸಚಿವರಾದ ಪ್ರಲ್ಹಾದ ಜೋಶಿ, ರಸಗೊಬ್ಬರ ಸಚಿವ ಸದಾನಂದ ಗೌಡ ಅವರನ್ನು ಭೇಟಿಯಾಗಿ, ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.
ಕೇಂದ್ರ ಪಂಚಾಯತಿ ರಾಜ್, ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಪರಷೋತ್ತಮ ರುಪಾಲ,  ಅವರನ್ನು ಭೇಟಿಯಾಗಿ ರೈತರ ಆರ್ಥಿಕ ಬಲವರ್ಧನೆಗಾಗಿ ಜಾರಿಗೆ ತಂದಿರುವ “ಸಂಕಲ್ಪ ಸೆ ಸಿದ್ಧಿ” ಯೋಜನೆಯ ಕುರಿತು ಸುದೀರ್ಘ ಸಮಾಲೋಚನೆ ನಡೆಸಲಾಯಿತು.
ಕಡಿಮೆ ವಾರ್ಷಿಕ ಆದಾಯವನ್ನು ಹೊಂದಿರುವ ರೈತ ವರ್ಗ ಹಾಗೂ ಬಡ ಕುಟುಂಬಗಳನ್ನು ಗುರುತಿಸಿ ಅವರ ಆರ್ಥಿಕ ಸ್ಥಿತಿಯನ್ನು  “ಸಂಕಲ್ಪ ಸೆ ಸಿದ್ಧಿ”  ಯೋಜನೆಯಿಂದ ಉತ್ತಮಗೊಳಿಸಲಾಗುವುದು. ಈ ಯೋಜನೆ ಅಡಿಯಲ್ಲಿ 2022 ರೊಳಗೆ ರೈತರ ವಾರ್ಷಿಕ ಆದಾಯವನ್ನು ದ್ವಿಗುಣ ಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಸಚಿವರು ಮಾಹಿತಿ ನೀಡಿದರು.
 ಮನವಿಗಳಿಗೆ ಧನಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. 

 

(ಪ್ರಗತಿವಾಹಿನಿ ಸುದ್ದಿಗಳನ್ನು ಎಲ್ಲರಿಗೂ ಶೇರ್ ಮಾಡಿ) 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button