ಸಚಿವೆ ಲಕ್ಷ್ಮೀ ಹೆಬ್ಬಾಳಕರ ನಿವಾಸಕ್ಕೆ ಭೇಟಿ ನೀಡಿದ ಸಂಸದೆ ಪ್ರಿಯಂಕಾ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಂಸದೆಯಾದ ಬಳಿಕ ಪ್ರಿಯಂಕಾ ಜಾರಕಿಹೊಳಿ ಅವರು ಜಿಲ್ಲೆಯ ವಿವಿಧ ಗಣ್ಯರ ಮನೆಗೆ ಭೇಟಿ ನೀಡುತ್ತಿದ್ದು, ಅದರಂತೆ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಮನೆಗೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಸಚಿವೆ ಹೆಬ್ಬಾಳಕರ ಹಾಗೂ ಅವರ ತಾಯಿ ಆಶೀರ್ವಾದವನ್ನು ಪಡೆದು ಸನ್ಮಾನ ಸ್ವೀಕರಿಸಿದರು.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಕುಟುಂಬಸ್ಥರು ತಮ್ಮ ಮನೆಗೆ ಆಗಮಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಹೂಗುಚ್ಚ ನೀಡುವ ಮೂಲಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳರ ಅವರು ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಸಿಹಿ ತಿನ್ನಿಸಿ, ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಅದೇ ರೀತಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಕೂಡಾ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಂಸದೆ ಪ್ರಿಯಂಕಾ ಜಾರಕಿಹೊಳಿಗೆ ಯುವ ನಾಯಕ್ ರಾಹುಲ್ ಜಾರಕಿಹೊಳಿ ಸಾಥ್ ನೀಡಿದರು
ಅಲ್ಲದೇ ಸಚಿವೆ ಹೆಬ್ಬಾಳಕರ ಸಂಸದೆ ಪ್ರಿಯಂಕಾ ಅವರ ಜೊತೆ ಕುಳಿತು ಸ್ವಲ್ಪ ಹೊತ್ತು ಕುಶಲೋಪರಿ ವಿಚಾರಿಸಿ ನಂತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.
ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿ, ಪ್ರಿಯಂಕಾ ಜಾರಕಿಹೊಳಿ ಅವರು ಅತಿ ಚಿಕ್ಕ ವಯಸ್ಸಿನಲ್ಲಿ ಸಂಸದೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಇವರಿಗೆ ಒಳ್ಳೆಯ ಯಶಸ್ಸು ದೊರೆಯಲಿ ಎಂದು ಹಾರೈಸಿದರು.
ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವೆ ಹೆಬ್ಬಾಳಕರ ಅವರ ಪುತ್ರ ಮೃಣಾಲ್ ಹೆಬ್ಬಾಳಕರ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಯುವರಾಜ ಕದಂ, ಮನೋಹರ್ ಬೆಳಗಾಂವ್ಕರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ