Politics

*ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಪ್ರಕರಣ ಖಂಡಿಸಿ ಬಿಜೆಪಿ ಮೈಸೂರು ಚಲೋ ಪ್ರತಿಭಟನೆಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಲೆಂದು ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವು ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಬಿಜೆಪಿ ನಾಯಕರು ನಾಯಂಡಹಳ್ಳಿ ಟೋಲ್ ಗೇಟ್ ಬಳಿ ಜಮಾವಣೆಗೊಂಡಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಎಂ.ಕೃಷ್ಣಪ್ಪ, ನಂದೀಶ್ ರೆಡ್ಡಿ, ಮಾಜಿ ಸಚಿವ ಮುನಿರತ್ನ ಸೇರಿದಂತೆ ಹಲವು ನಾಯಕರನ್ನು, ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.

ಈ ವೇಳೆ ಟೋಲ್ ಗೇಟ್ ಬಳಿಯೇ ಕುಳಿತು ಪ್ರತಿಭಟನಾ ಧರಣಿ ನಡೆಸಿದ್ದು, ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಬಿ.ವೈ.ವಿಜಯೇಂದ್ರ, ನಂದೀಶ್ ರೆಡ್ಡಿ, ಮುನಿರತ್ನ ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹಲವು ಕಾರ್ಯಕರ್ತರನ್ನೂ ವಶಕ್ಕೆ ಪಡೆಯಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button