ಪ್ರಗತಿವಾಹಿನಿ ಸುದ್ದಿ : ದೆಹಲಿ ಮದ್ಯ ನೀತಿ ಹಗರಣದಲ್ಲಿ ಜೈಲು ಸೇರಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತರ ಜಾಮೀನು ಸಿಕ್ಕಿದೆ.
ಜಾರಿ ನಿರ್ದೇಶನಾಲಯ(ಇಡಿ)ದಿಂದ ತಮ್ಮ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಿದ್ದು, ಜಾಮೀನು ನೀಡಲಾಗಿದೆ.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು ತೀರ್ಪನ್ನು ಜುಲೈ 12ಕ್ಕೆ ಕಾಯ್ದಿರಿಸಿತ್ತು. ಅದರಂತೆ ತೀರ್ಪು ನೀಡಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಜುಲೈ 15 ಕ್ಕೆ ನಿಗದಿಪಡಿಸಿದೆ. ಈ ಹಿಂದೆ ಕೇಜ್ರಿವಾಲ್ಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯ ಜೂನ್ 20 ರ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ