ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ವಶಕ್ಕೆ ಪಡೆದಿದ್ದ ಇಡಿ, ಅಧಿಕೃತವಾಗಿ ಬಂಧಿಸಿದೆ.
ಬಿ.ನಾಗೇಂದ್ರ ಅವರ ಸುದೀರ್ಘ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳಿದ್ದು, ಜುಲೈ 18ವರೆಗೆ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದ್ದು, ಕೋಟ್ಯಂತರ ರೂಪಾಯಿ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಇಡಿ, ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿದೆ. ಅಲ್ಲದೇ ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಅವರನ್ನು ವಿಚಾರಣೆ ನಡೆಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ