Latest

*ಮಗನನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ*

ಪ್ರಗತಿವಾಹಿನಿ ಸುದ್ದಿ: ಪತಿ ಸಾವಿನಿಂದ ಮನನೊಂದು ತಾಯಿಯೊಬ್ಬಳು ಹೆತ್ತ ಮಗನನ್ನೇ ಕೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರಿನ ಯಲಹಂಕದ RNZ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. 13 ವರ್ಷದ ಮಗ ಭಾರ್ಗವ್ ನನ್ನು ಹತ್ಯೆಗೈದ ತಾಯಿ ರಮ್ಯಾ (40) ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೆಲ ತಿಂಗಳ ಹಿಂದೆ ರಮ್ಯಾ ಪತಿ ಸಾವನ್ನಪ್ಪಿದ್ದರು. ಪತಿ ಅಗಲಿಕೆಯಿಂದ ಕಂಗೆಟ್ಟಿದ್ದ ರಮ್ಯಾ ಮಾನಸಿಕವಾಗಿ ಕುಗ್ಗಿ ಹೋಗಿದ್ದರು. ಇದೇ ನೋವಿನಲ್ಲಿ ಪುತ್ರನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Related Articles

Back to top button