ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡಕ್ಕೆ ಹಾರಿ ಪ್ರೇಮಿಗಳಿಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಎಂ.ಮುದ್ದಲಹಳ್ಳಿಯಲ್ಲಿ ನಡೆದಿದೆ.
ವೇಣು(21) ಹಾಗೂ ಅನುಷಾ (19) ಆತ್ಮಹತ್ಯೆ ಮಾಡಿಕೊಂಡಿರುವ ಪ್ರೇಮಿಗಳು. ವೇಣು ಎಂ.ಮುದ್ದಲಹಳ್ಳಿ ನಿವಾಸಿಯಾಗಿದ್ದರೆ. ಅನುಷಾ ಕಾಚಹಳ್ಳಿ ನಿವಾಸಿ. ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಜಾತಿಯ ಕಾರಣ ನೀಡಿ ಅನುಷಾ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಅಲ್ಲದೇ ತಿಂಗಳ ಹಿಂದೆ ಅನುಷಾಳನ್ನು ಬೇರೊಬ್ಬನ ಜೊತೆ ವಿವಾಹ ಮಾಡಿಕೊಡಲಾಗಿತ್ತು.
ಆಷಾಢ ಮಾಸಕ್ಕೆಂದು ಅನುಷಾ ತವರಿಗೆ ಬಂದಿದ್ದಳು. ಈ ವೇಳೆ ಎಂ.ಮುದ್ದಲಹಳ್ಳಿಗೆ ತೆರಳಿ ಪ್ರಿಯಕರ ವೇಣುನನ್ನು ಭೇಟಿಯಾಗಿದ್ದಾಳೆ. ಬಳಿಕ ಇಬ್ಬರೂ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕೆಂಚಾರ್ಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ