Latest

*ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆಯ ಬರೆ: ತೈಲ, ಹಾಲಿನ ದರ ಬಳಿಕ ಮತ್ತೊಂದು ಶಾಕ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದುಬಾರಿ ದುನಿಯಾ ಆರಂಭವಾಗಿದ್ದು, ಜನಸಾಮಾನ್ಯರು, ಮಧ್ಯಮ ವರ್ಗದ ಜನರು ಜೀವನ ನಡೆಸುವುದು ದುಸ್ಥರವಾಗಿದೆ. ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ದರ, ಹಾಲಿನ ದರ ಏರಿಕೆ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಮತ್ತೆ ಬೆಲೆ ಏರಿಕೆ ಬರೆ ನೀಡಲು ಮುಂದಾಗಿದೆ.

ಬಸ್ ಟಿಕೆಟ್ ಪ್ರಯಾಣ ದರವನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ರಾಜು ಕಾಗೆ ಮಾಹಿತಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಾಜು ಕಾಗೆ, ಬಸ್ ಟಿಕೆಟ್ ದರ ಹೆಚ್ಚಿಸಲಾಗುವುದು. ಶಕ್ತಿ ಯೋಜನೆಯಿಂದಾಗಿ ಸಾರಿಗೆ ನಿಗಮ ನಷ್ಟದಲ್ಲಿದೆ. ಅಲ್ಲದೇ ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಸಿಲ್ಲ. ಈ ನಿಟ್ಟಿನಲ್ಲಿ ಬಸ್ ಟಿಕೆಟ್ ದರ ಏರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button