National

*ಆಸ್ಪತ್ರೆಗೆ ನುಗ್ಗಿ ರೋಗಿಯ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು*

ಪ್ರಗತಿವಾಹಿನಿ‌ ಸುದ್ದಿ: ಹಳೆ ವೈಷಮದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ ಘಟನೆ ನಡೆದಿದೆ.

ದೆಹಲಿಯ ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಈ ಘಟನೆ ನಡೆದಿದೆ. ರಿಯಾಜುದ್ದೀನ್ (32) ಮೃತ ವ್ಯಕ್ತಿ. ಈತ ಖಜೂರಿ ಖಾಸ್ ನಿವಾಸಿಯಾಗಿದ್ದರು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಿಯಾಜುದ್ದೀನ್ ಅವರನ್ನು ಜೂನ್ 23 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Home add -Advt

ರಿಯಾಜುದ್ದೀನ್ ಮೇಲೆ 3-4 ಸುತ್ತು ಗುಂಡು ಹಾರಿಸಿದ್ದಾರೆ. ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು 18 ವರ್ಷದ ಯುವಕನೆಂದು ಗುರುತಿಸಿದ್ದಾರೆ. ದಾಳಿಯ ಹಿಂದಿನ ಪ್ರಚೋದನೆ ಏನು ಎಂಬುದು ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button