ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಬಳಿಯ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಗಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಪತ್ನಿ ಅಶ್ವಿನಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಬೆಂಕಿ ಅವಘಡದಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ. ಆಸ್ಪತ್ರೆಗೆ ದಾಖಲಾಗಿದ್ದ ರಮಾನಂದ ಶೆಟ್ಟಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಅಶ್ವಿನಿಗೆ ಚಿಕಿತ್ಸೆ ಮುಂದುವರೆದಿದೆ. ರಮಾನಂದ ಶೆಟ್ಟಿ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ