Latest

*ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮತ್ತೆ ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಮತ್ತೆ ಸಂಕಷ್ಟ ಎದುರಾಗಿದೆ.

Home add -Advt

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ತಮ್ಮ ವಿರುದ್ಧ ದಾಖಲಾಗಿದ್ದ ಆದಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ಆದೇಶ ಪ್ರಶ್ನಿಸಿ ಹಾಗೂ ಪ್ರಕರಣ ರದ್ದು ಕೋರಿ ಡಿಸಿಎಂ ಡಿ.ಕೆ.ಶಿವಕುಮಾರ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿ ವಜಾಗೊಳಿಸಿದೆ.

Related Articles

Back to top button