Kannada NewsKarnataka NewsNationalPolitics

*ಗುಡ್ಡ ಕುಸಿತ ಪ್ರಕರಣ: ಮತ್ತಿಬ್ಬರ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅಂಕೋಲಾ ತಾಲೂಕಿನ ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 7 ಜನರು ಸಾವನ್ನಪ್ಪಿದ್ದು, ಇನ್ನೂ ಇಬ್ಬರ ಶವ ಪತ್ತೆಯಾಗಿದೆ. ಒಟ್ಟೂ ಮೂವರ ಶವ ಸಿಕ್ಕಿದಂತಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಸಂಭವಿಸಿದೆ.

Home add -Advt

ಟ್ಯಾಂಕರ್ ಚಾಲಕ ಮತ್ತು ಹೋಟೆಲ್ ಮಾಲೀಕ ಲಕ್ಷ್ಮಣ ಎಂಬುವವರ ಶವ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ.‌ ಇನ್ನೂ ಹಲವರು ಮಣ್ಣುಗಳಡಿ ಸಿಲಿಕಿರುವ ಶಂಕೆ ವ್ಯಕ್ತವಾಗಿದೆ.‌ ಇನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಲಾರಿಯಲ್ಲಿ ಪ್ರಯಾಣ ಮಾಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.‌ ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಚುರುಕುಗೊಂಡಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಹೇಳಿದ್ದಾರೆ. 

5 ಲಕ್ಷ ಪರಿಹಾರ ಘೋಷಣೆ

ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಸಾವನ್ನಪ್ಪಿರುವರ ಕುಟುಂಭಕ್ಕೆ 5 ಲಕ್ಷ ಪರಿಹಾರ ನೀಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಬೈರೆಗೌಡಾ ಅವರು ಸದನದಲ್ಲಿ ತಿಳಿಸಿದ್ದಾರೆ.‌

Related Articles

Back to top button