ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಪಂಚಗಂಗಾ ಹಾಗೂ ಕೃಷ್ಣಾ ನದಿಯ ನೀರು ಹೆಚ್ಚಳವಾಗಿದೆ. ಪರಿಣಾಮ ಪುರಾಣ ಪ್ರಸಿದ್ಧ ನರಸಿಂಹವಾಡಿ ದತ್ತಾತ್ರೇಯ ಮಂದಿರವು ಸಂಪೂರ್ಣವಾಗಿ ಜಲದಿಬ್ಬಂಧನಗೊಂಡಿದೆ.
ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ನರಸಿಂಹವಾಡಿ ದತ್ತಾತ್ರೇಯ ಮಂದಿರಕ್ಕೆ ಪಂಚಗಂಗಾ ಹಾಗೂ ಕೃಷ್ಣಾ ನದಿಯ ನೀರು ನುಗ್ಗಿದೆ. ನದಿ ನೀರಿನಿಂದ ಪುಣ್ಯಕ್ಷೇತ್ರ ಮುಳುಗಡೆಗೊಂಡಿದೆ. ಮೊಣಕಾಲು ಮಟ್ಟದಲ್ಲಿ ನೀರು ಹರಿಯುತ್ತಿದ್ದರೂ ಭಕ್ತರು ಮಾತ್ರ ದತ್ತಾತ್ರೇಯ ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಪಂಚಗಂಗಾ ನದಿ ಹಾಗೂ ಕೃಷ್ಣಾ ನದಿ ಸಂಗಮವಾಗುವ ಕ್ಷೇತ್ರವು ಕೂಡಾ ಇದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ