ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದೀಗ ಐದು ತಿಂಗಳ ಮಗುವೊಂದು ಶಂಕಿತ ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಘಟನೆ ನಡೆದಿದೆ.
ಧಾರವಾಡದಲ್ಲಿ ಈ ಘಟನೆ ನಡೆದಿದ್ದು, ನಗರದ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗೋಪಾಲ ಲಮಾಣಿ ಎಂಬುವವರ ಮಗಳು ಆರಾಧ್ಯ ಜ್ವರದಿಂದ ಸಾವನ್ನಪ್ಪಿರುವ ಕಂದಮ್ಮ.
ಕೆಲ ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಈ ಹಿನ್ನೆಲೆಯಲ್ಲಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಈಗ ಮಗು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ. ಮಗು ಡೆಂಗ್ಯೂ ಸೋಂಕಿಗೆ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ