Kannada NewsKarnataka News

ಪರಿಹಾರ ಕೇಂದ್ರಗಳಲ್ಲಿ ಯಾವ ಕೊರತೆಯೂ ಇಲ್ಲ -ಜಿಲ್ಲಾಧಿಕಾರಿ

ಪರಿಹಾರ ಕೇಂದ್ರಗಳಲ್ಲಿ ಯಾವ ಕೊರತೆಯೂ ಇಲ್ಲ -ಜಿಲ್ಲಾಧಿಕಾರಿ

ಪ್ರಗತಿವಾಹಿನಿ  ಬೆಳಗಾವಿ- ಪ್ರವಾಹ ಸಂತ್ರಸ್ತ ಕುಟುಂಬಗಳಿಗಾಗಿ ಜಿಲ್ಲೆಯಲ್ಲಿ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳಲ್ಲಿ ಊಟೋಪಹಾರ, ಹಾಸಿಗೆ, ಹೊದಿಕೆ ಹಾಗೂ ವೈದ್ಯಕೀಯ ಸೌಲಭ್ಯಗಳು ಸೇರಿದಂತೆ ಯಾವುದೇ ಬಗೆಯ ಕೊರತೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.
ಗೋಕಾಕ ತಾಲ್ಲೂಕಿನ ವಿವಿಧ ಪರಿಹಾರ ಕೇಂದ್ರಗಳಿಗೆ ಅವರು ಸೋಮವಾರ ಭೇಟಿ ನೀಡಿ, ಪರಿಶೀಲಿಸಿದರು. ಗೋಕಾಕ ಪಟ್ಟಣದ ಎಪಿಎಂಸಿ ಆವರಣ ಹಾಗೂ ಬಿಸಿಎಂ ವಸತಿಗೃಹದಲ್ಲಿ ಆರಂಭಿಸಿರುವ ಪರಿಹಾರ ಕೇಂದ್ರಗಳಿಗೆ ತೆರಳಿ ಅಲ್ಲಿನ ಸೌಲಭ್ಯಗಳನ್ನು ಪರಿಶೀಲಿಸಿದರು.
ಆಶ್ರಯ ಪಡೆದುಕೊಂಡಿರುವ ಕುಟುಂಬದ ಸದಸ್ಯರ ಜತೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು, ಊಟೋಪಹಾರ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಂಡರು.
ಇದಾದ ಬಳಿಕ ಹೆಡಗಿನಹಾಳ ಹಾಗೂ ಮೂಡಲಗಿ ತಾಲ್ಲೂಕಿನ ಪಿ.ಜಿ.ಹುಣಾಸ್ಯಾಳ ಪರಿಹಾರ ಕೇಂದ್ರಗಳಿಗೂ ಭೇಟಿ ನೀಡಿದ ಅವರು, ಪರಿಹಾರ ಕೇಂದ್ರದಲ್ಲಿ ನೀಡಲಾಗುತ್ತಿತುವ ಸೌಲಭ್ಯಗಳ ಬಗ್ಗೆ ಖುದ್ದಾಗಿ ಮಾಹಿತಿಯನ್ನು ಪಡೆದುಕೊಂಡರು.

ಊಟೋಪಹಾರ ನಿಲ್ಲಿಸಿಲ್ಲ:

ಪರಿಹಾರ ಕೇಂದ್ರಗಳಲ್ಲಿ ಯಾವುದೇ ಸಂದರ್ಭದಲ್ಲಿಯೂ ಊಟೋಪಹಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಇದಲ್ಲದೇ ಪ್ರತಿಯೊಂದು ಪರಿಹಾರ ಕೇಂದ್ರದಲ್ಲಿ ವೈದ್ಯಕೀಯ ಸೌಲಭ್ಯ ಕೂಡ ಮುಂದುವರಿಸಲಾಗಿದೆ.
ಹಾಸಿಗೆ, ಹೊದಿಕೆಗಳನ್ನು ಒದಗಿಸಲಾಗಿದ್ದು, ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದ್ದು, ಸಮರ್ಪಕ ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಪರಿಹಾರ ಕೇಂದ್ರಗಳಲ್ಲಿ ಒಂದು ವೇಳೆ ಏನಾದರೂ ತೊಂದರೆ ಕಂಡುಬಂದರೆ ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಅಥವಾ ನೇರವಾಗಿ ತಮ್ಮ ಗಮನಕ್ಕೆ ತರಬೇಕು ಎಂದು ಸಂತ್ರಸ್ತ ಕುಟುಂಬಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.
ಅಪರ ಪ್ರಾದೇಶಿಕ ಆಯುಕ್ತರಾದ ರಮೇಶ್ ಕಳಸದ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button