Belagavi NewsBelgaum NewsKannada NewsKarnataka News

*ಬೈಕ್‌ ಮತ್ತು ಕ್ರೂಸರ್ ನಡುವೆ ಡಿಕ್ಕಿ: ಓರ್ವ ಸಾವು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ, ಅಡಿವೆಪ್ಪನ ಮಠದ ಮುಂಭಾಗದ ರಸ್ತೆಯಲ್ಲಿ ಬೈಕ್ ಮತ್ತು ಕ್ರೂಸರ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ಅನೀಲ್ ಬಿಚಗತ್ತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ. 

Home add -Advt

ಬೈಕ್ ಹಿಂಬದಿ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಲ್ಮಟ್ ಧರಿಸದೆ ಇದ್ದುದರಿಂದ ಅನೀಲ್ ತಲೆಗೆ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಸ್ಥಳಕ್ಕೆ ಅಂಕಲಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಅಂಕಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Related Articles

Back to top button