ಡ್ರಗ್ಸ್, ಗಂಜಾ ಪತ್ತೆ
ಪ್ರಗತಿವಾಹಿನಿ ಸುದ್ದಿ: ಮಂಗಳೂರು ಜೈಲಿನ ಮೇಲೆ ಪೊಲೀಸ್ ಅಧಿಕಾರಿಗಳು ಬೆಳಿಗ್ಗೆ ಯೇ ದಾಲಿ ನಡೆಸಿದ್ದು, ಅಪಾರ ಪ್ರಮಾಣದ ಗಾಂಜಾ, ಡ್ರಗ್ಸ್, ಹಲವು ವಸ್ತುಗಳು ಪತ್ತೆಯಾಗಿವೆ.
ಮಂಗಳೂರಿನ ಕೋಡಿಯಾಲ್ ಬೈಲ್ ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಈ ವೇಳೆ ಗಾಂಜಾ, ಡ್ರಗ್ಸ್, 25 ಮೊಬೈಲ್ ಫೋನ್ ಗಳು, ಒಂದು ಬ್ಲೂಟೂತ್, ಕತ್ತರಿ ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ.
150ಕ್ಕೂ ಹೆಚ್ಚು ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಎಲ್ಲಾ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ಜೈಲಿನಲ್ಲಿ ಡ್ರಗ್ಸ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತನಿಖೆಗೆ ಆದೇಶ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ