Karnataka News

*50,000 ಕ್ಯೂಸೆಕ್ ನೀರು ಬಿಡುಗಡೆ; ಪ್ರವಾಹ ಮುನ್ನೆಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಜಲಾಶಯ ಭರ್ತಿಯಾಗಿದ್ದು, ಸುಮಾರು 50,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

Related Articles

ಕೆಆರ್ ಎಸ್ ನಿಂದ 50,000 ಕ್ಯೂಸೆಕ್ಸ್ ನರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಲಿದ್ದು, ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಡದಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರವಹಿಸುವಂತೆ ಸೂಚಿಸಲಾಗಿದೆ.

ಸೂಕ್ತ ಮುಂಜಾಗೃತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕೃಷ್ಣರಾಜಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಆದೇಶ ನೀಡಿದ್ದಾರೆ.

Home add -Advt


Related Articles

Back to top button