Karnataka News

*7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ ಅಯೋಮಯವಾಗಿದೆ. ಈ ನಡುವೆ ರಾಜ್ಯದ 7 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Home add -Advt

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ರಾಮನಗರ, ವಿಜಯನಗರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಆಗಾಗ ಗಾಳಿ, ಮಳೆಯಾಗುತ್ತಿದೆ. ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.


Related Articles

Back to top button