ರಾಷ್ಟ್ರಪತಿಗಳನ್ನು ಆಹ್ವಾನಿಸಿದ ಡಾ.ಪ್ರಭಾಕರ ಕೋರೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಕೆಎಲ್ಇ ಸಂಸ್ಥೆ ಬೆಳಗಾವಿಯಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಕ್ಯಾನ್ಸರ್ ಆಸಪ್ತೆ ಉದ್ಘಾಟಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದಾರೆ. ಮುಂದಿನ ತಿಂಗಳು ಆಸ್ಪತ್ರೆ ಉದ್ಘಾಟನೆಯಾಗದಲಿದೆ.
ಬೆಳಗಾವಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೆಎಲ್ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲು ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಆಹಾನಿಸಿದ್ದಾರೆ.
ಕೆಎಲ್ಇ ಸಂಸ್ಥೆಯು ಮಹಾಮಾರಿ ಕ್ಯಾನ್ಸರ್ ತೊಡೆದು ಹಾಕಲು ಬಹುವಾಗಿ ಶ್ರಮಿಸುತ್ತಿದೆ, ಈ ನಿಟ್ಟಿನಲ್ಲಿ ಸಕಲ ಅತ್ಯಾಧುನಿಕ ಸೌಲಭ್ಯಗಳೊಂದಿಗೆ 300 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಲಾಗಿದ್ದು ರಾಷ್ಟ್ರಪತಿಗಳು ಅದನ್ನು ಲೋಕಾರ್ಪಣೆಗೊಳಿಸಬೇಕೆಂದು ವಿನಂತಿಸಿದ್ದಾರೆ.
ಸಕಾರಾತ್ಮಕವಾಗಿ ಸ್ಪಂದಿಸಿದ ರಾಷ್ಟ್ರಪತಿಗಳು ಸಂಸ್ಥೆಯ ಈ ಮೌಲಿಕ ಸಾಮಾಜಿಕ ಸೇವೆ ಹಾಗೂ ಕೈಂಕರ್ಯವನ್ನು ಅಭಿನಂದಿಸಿ ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ದಿನಾಂಕವನ್ನು ಸೂಚಿಸುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ್ ಕವಟಗಿಮಠ ಉಪಸ್ಥಿತರಿದ್ದರು.
ಕ್ಯಾನಸ್ರ್ ಆಸ್ಪತ್ರೆ ಉತ್ತರ ಕರ್ನಾಟಕ, ದಕ್ಷಿಣ ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಕ್ಕೆ ಕೆಎಲ್ಇ ಸಂಸ್ಥೆಯ ಅತ್ಯಂತ ದೊಡ್ಡ ಕೊಡುಗೆಯಾಗಲಿದೆ. ಡಾ.ಪ್ರಭಾಕರ ಕೋರೆಯವರ ಬಹುದೊಡ್ಡ ಕನಸು ಈ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಾಣ ಮಾಡಿ, ಜನತೆಗೆ ಅರ್ಪಿಸುವುದಾಗಿದೆ.
ಡಾ.ಎಂ.ವಿ.ಜಾಲಿಯವರು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಅತ್ಯಾಧುನಿಕ ಯಂತ್ರೋಪಕರಣಗಳಿಂದ ಆಸ್ಪತ್ರೆ ರೋಗಿಗಳಿಗೆ ಸಕಲ ಸೇವೆ ನೀಡಲು ಸಜ್ಜಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ