Belagavi NewsBelgaum NewsKannada NewsKarnataka News

*8 ಜಿಲ್ಲೆಯಲ್ಲಿ ಭಾರಿ ಮಳೆ: ಆರೇಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಕೆಲವೆಡೆ ಮಳೆಯ ಆರ್ಭಟ ಜೋರಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಎಲ್ಲೆಡೆ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

ಜುಲೈ 28 ರ ತನಕ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳು ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಕೊಡಗು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯಾಗಬಹುದು.

Home add -Advt

ಹಾಗೆಯೇ ಕಳೆದ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಇಂದು ಕೂಡ ಮುಂದುವರಿಯಲಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಆದ್ದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ ಕೋಲಾರ, ತುಮಕೂರು,ರಾಮನಗರ, ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ.

Related Articles

Back to top button