ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಹಾಮಾರಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಡೆಂಗ್ಯೂ ಸೋಂಕಿನಿಂದ 5 ವರ್ಷದ ಬಾಲಕಿ ಸಾವನ್ನಪ್ಪಿರುವ ಗಹ್ಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ನಡೆದಿದೆ.
5 ವರ್ಷದ ಪೂರ್ಣಾ ಮೃತ ಬಾಲಕಿ. ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಬಾಲಕಿ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಭಾರಿ ಮಳೆ ನಡುವೆ ಡೆಂಗ್ಯೂ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ