------WebKitFormBoundaryTxLS����
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ನಗರಕ್ಕೆ ರಾಜಸ್ಥಾನದಿಂದ ಸರಬರಾಜು ಆಗಿರುವುದು ನಾಯಿ ಮಾಂಸ ಅಲ್ಲ, ಕುರಿ ಮಾಂಸ ಎಂದು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಅಧಿಕಾರಿಗಳು ಹೇಳಿದ್ದಾರೆ.
ಜೈಪುರದಿಂದ ರೈಲಿನಲ್ಲಿ ಶಕ್ರವಾರ ಸಂಜೆ ಮೆಜೆಸ್ಟಿಕ್ ಗೆ ಬಂದು ತಲುಪಿರುವ 2700 ಕೆಜಿ ಕುರಿ ಮಾಂಸವನ್ನು ನಾಯಿ ಮಾಂಸ ಎಂದು ಆರೋಪಿಸಿ ಹಿಂದೂ ಕಾರ್ಯಕರ್ತ ಎಂದು ಹೇಳಿಕೊಳ್ಳುತ್ತಿರುವ ಪುನೀತ್ ಕೆರೆಹಳ್ಳಿ ಪ್ರತಿಭಟನೆ ನಡೆಸಿ ಈಗ ಜೈಲು ಸೇರಿದ್ದಾರೆ.
ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಇದು ಕುರಿ ಮಾಂಸವಾಗಿದ್ದು, ರಾಜಸ್ಥಾನದ ತಳಿ ಎಂದು ಸ್ಪಷ್ಟ ಪಡಿಸಿದ್ದಾರೆ. ಪ್ರತಿಭಟನೆ ವೇಳೆ ಆಹಾರ ಸುರಕ್ಷತಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆ ಹಳ್ಳಿ ಮತ್ತು ಇಬ್ಬರು ಸಹಚರರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ