ಪ್ರಗತಿವಾಹಿನಿ ಸುದ್ದಿ: ಬಿ.ವೈ.ವಿಜಯೇಂದ್ರ ಅವರನ್ನು ನಾಯಕ ಎಂದು ಇನ್ನೂ ಒಪ್ಪಿಕೊಂಡಿಲ್ಲ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಗೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಗೋಕಾಕ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ರಮೇಶ್ ಜಾರಕಿಹೊಳಿ, ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಎಂದು ನಾನು ಒಪ್ಪಿಕೊಂಡಿಲ್ಲ. ಅವರನ್ನು ನಾಯಕ ಎಂದು ಒಪ್ಪಿಕೊಳ್ಳಲಾಗದು. ನಾನು ಅವರೊಂದಿಗೆ ಮಾತನಾಡಲ್ಲ ಎಂದಿದ್ದರು.
ಇದೇ ಹೇಳಿ ವಿಚಾರವಾಗಿ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಬಿ.ವೈ.ವಿಜಯೇಂದ್ರ, ನಾನು ನಾಯಕ ಎಂದು ಎಲ್ಲೂ ಹೇಳಿಕೊಂಡಿಲ್ಲ. ಒಂದಿಬ್ಬರು ಏನೋ ಹೇಳಿಕೆ ಕೊಡ್ತಾರೆ ಎಂದು ಅದಕ್ಕೆ ಪ್ರಾಮುಖ್ಯತೆ ಕೊಡುವ ಅಗತ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.
ಯತ್ನಾಳ್ ಜೊತೆ ಸೇರಿ ಪಾದಯಾತ್ರೆ ಮಾಡುವುದಾಗಿ ಹೇಳಿರುವ ರಮೇಶ್ ಜಾರಕಿಹೊಳಿ ಹೇಳಿಕೆಗೂ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು ಪಾದಯಾತ್ರೆ ಮಾಡಿದರೆ ಪಕ್ಷಕ್ಕೆ ಇನ್ನಷ್ಟು ಶಕ್ತಿ ಬರುತ್ತದೆ. ಇನ್ನು ಜಿ.ಟಿ.ದೇವೇಗೌಡರ ಅಸಮಾಧಾನ ಕೂಡ ಶೀಘ್ರ ಶಮನವಾಗಲಿದೆ ಎಂದು ಹೇಳಿದ್ದಾರೆ.
ಬಿಜೆಪಿ ನಾಯಕರ ವಿರುದ್ಧವೇ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಟ್ವೀಟ್ ಮೂಲಕ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ನಾವು ಕಾಟಾಚಾರಕ್ಕೆ ಹೋರಾಟ ಮಾಡುತ್ತಿಲ್ಲ. ಮಂಗಳವಾರ, ಬುಧವಾರ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಜೀಲನೆ ನಡೆಸುತ್ತೇವೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ