ಪ್ರಗತಿವಾಹಿನಿ ಸುದ್ದಿ: ಡಿಕೆಶಿ ಸೂಚನೆ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಡಾ ಹಗರಣದ ವಿರುದ್ಧ ಪಾದಯಾತ್ರೆ ನಡೆಸುತ್ತಿದ್ದಾರೆ ಎಂಬ ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿಯವರು ಮೊದಲು ಅವರ ಮನೆ ಸರಿಪಡಿಸಿಕೊಳ್ಳಬೇಕು ಬಳಿಕ ನಮ್ಮ ವಿರುದ್ಧ ಹೋರಾಟ ನಡೆಸಲಿ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಗೆ ಎಷ್ಟು ಬಾಗಿಲು ಎಂಬುದೇ ಗೊತ್ತಾಗುತ್ತಿಲ್ಲ. ಸ್ವಪಕ್ಷದ ನಾಯಕರ ವಿರುದ್ಧವೇ ಬಿಜೆಪಿ ನಾಯಕರ ಹೇಳಿಕೆ ನೋಡಿದರೆ ಮೂರು ಬಾಗಿಲೋ, ಆರು ಬಾಗಿಲೋ ಎನ್ನುವಂತೆ ಎಷ್ಟು ಬಾಗಿಲು ಎಂಬುದು ಗೊತ್ತಾಗುತ್ತಿಲ್ಲ. ಬಿಜೆಪಿಯವರು ನಮಗೆ ಬುದ್ಧಿವಾದ ಹೇಳುವ ಮೊದಲು ತಮ್ಮ ಪಕ್ಷ, ಮನೆ ಸರಿಪಡಿಸಿಕೊಳ್ಳಲಿ ಎಂದು ಹೇಳಿದರು.
ಬಿಜೆಪಿ ಪಾದಯಾತ್ರೆಗೆ ಅನುಮತಿ ಕೊಡುವುದಿಲ್ಲ. ಪೊಲೀಸ್ ಇಲಾಖೆಯಿಂದ ಅನುಮತಿ ಇಲ್ಲ. ಅವರ ಪಾಡಿಗೆ ಅವರು ನಡೆದು ಹೋಗುತ್ತಾರೆ ಎಂದರೆ ನಮ್ಮ ಅಭ್ಯಂತರವಿಲ್ಲ. ಆದರೆ ಕಾನೂನು ಬಾಹಿರ ಕೆಲಸ ಮಾಡಿ, ಜನರಿಗೆ ತೊಂದರೆ ಕೊಟ್ಟರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ