National

*ರಣಮಳೆಗೆ ಸರಣಿ ಭೂ ಕುಸಿತ; ಸಾವಿನ ಸಂಖ್ಯೆ 41ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ; ರಣ ಭೀಕರ ಮಳೆಗೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ಮೂರು ಗ್ರಾಮಗಳಲ್ಲಿ ಸರಣಿ ಭೂ ಕುಸಿತ ಸಂಭವಿಸಿದ್ದು, ಸಾವಿನ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

Home add -Advt

ಭಾರಿ ಮಳೆ ಬೆನ್ನಲ್ಲೇ ವಯನಾಡಿನ ಮೆಪ್ಪಾಡಿ, ಮುಂಡಕೈ, ಚೂರಲ್ ಮಲ ಗ್ರಾಮಗಳಲ್ಲಿ ಸಾಲು ಸಾಲು ಭೂ ಕುಸಿತ ಸಂಭವಿಸಿದೆ. ಈವರೆಗೆ ಐವರು ಮಕ್ಕಳು ಸೇರಿದಂತೆ 41 ಜನರ ಮೃತದೇಹಗಳು ಪತ್ತೆಯಾಗಿವೆ. ಮಣ್ಣಿನಡಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ.

150ಕ್ಕೂ ಹೆಚ್ಚು ಜನರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕೇರಳದಾದ್ಯಂತ ಭಾರಿ ಮಳೆಯಾಗುತ್ತಿದ್ದು, ವಯನಾಡ್, ಕೊಯಿಕ್ಕೋಡ್, ಕಾಸರಗೋಡು, ಮಲಪ್ಪುರಂ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.


Related Articles

Back to top button