Belagavi NewsBelgaum NewsKannada NewsKarnataka NewsLatest

ಶನಿವಾರವೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಸಮೀಕ್ಷೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪ್ರವಾಹ ಪೀಡಿತ ಪ್ರದೇಶಗಳಿಗೆ ನಿರಂತರ ಭೇಟಿ ನೀಡಿ ಹಾನಿಯ ಸಮೀಕ್ಷೆ ನಡೆಸಿ, ಪ್ರವಾಹ ಸಂತ್ರಸ್ತರನ್ನು ಸಂತೈಸುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಕೂಡ ಮತ್ತಷ್ಟು ಹಳ್ಳಿಗಳಿಗೆ ಭೇಟಿ ನೀಡಲಿದ್ದಾರೆ.

ಶನಿವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಗ್ರಾಮೀಣ ಕ್ಷೇತ್ರದ ಪ್ರವಾಹ ಪ್ರದೇಶಗಳಿಗೆ ಸಚಿವರು ಭೇಟಿ ನೀಡುವರು. ಬೆಳಗ್ಗೆ 9 ಗಂಟೆಯಿಂದ ಕೊನೆವಾಡಿ, ಬೆಕ್ಕಿನಕೇರಿ, ಬಸುರ್ತೆ, ಅತ್ತಿವಾಡ, ಸುಳಗಾ (ಯು)ಗಳಿಗೆ ಭೇಟಿ ನೀಡುವರು.

ಮಧ್ಯಾಹ್ನ 3 ಗಂಟೆಗೆ ಬೆಳಗುಂದಿ, 3.30ಕ್ಕ ಸೋನೋಳಿ, 4 ಗಂಟೆಗೆ ಯಳೆಬೈಲ್, 4.30ಕ್ಕೆ ರಾಕಸಕೊಪ್ಪ ಹಾಗೂ 5 ಗಂಟೆಗೆ ಬೋಕಮುರ್ ಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button