ಅನರ್ಹರಿಗೆ ಶಾಕ್ -ಹಠಾತ್ ಉಪಚುನಾವಣೆ ಘೋಷಣೆ
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಅನಿರೀಕ್ಷಿತ ಬೆಳವಣಿಗೆಯಲ್ಲಿ ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಇಂದಿನಿಂದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಅಕ್ಟೋಬರ್ 21ರಂದು ಮತದಾನ ನಡೆಯುವುದು.
ರಾಜ್ಯದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಮ್ಮಿಶ್ರ ಸರಕಾರ ಕೆಡವಿ ಬಿಜೆಪಿ ಸರಕಾರವನ್ನು ಅಸ್ಥಿತ್ವಕ್ಕೆ ತರಲಾಗಿತ್ತು. ಆ ಸಂದರ್ಭದಲ್ಲಿ 17 ಶಾಸಕರು ರಾಜಿನಾಮೆ ಸಲ್ಲಿಸಿದ್ದರು. ನಂತರ ಅವರನ್ನೆಲ್ಲ ಸ್ಪೀಕರ್ ಅನರ್ಹಗೊಳಿಸಿದ್ದರು.
ಇದೀಗ ಆರ್ ಆರ್ ನಗರ ಮತ್ತು ಮಸ್ಕಿ ಕ್ಷೇತ್ರ ಹೊರತುಪಡಿಸಿ ಉಳಿದ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಸೆ.23ರಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಸೆ.30 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನ. ಅಕ್ಟೋಬರ್ 3 ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನ. ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, 24ರಂದು ಮತ ಎಣಿಕೆ ನಡೆಯುವುದು.
ಹರಿಯಾಣ ಮತ್ತು ಮಹರಾಷ್ಟ್ರ ರಾಜ್ಯಗಳ ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಕರ್ನಾಟಕದ ವಿಧಾನಸಭಾ ಕ್ಷೇತ್ರಗಳಿಗೂ ಉಚುನಾವಣೆ ಘೋಷಿಸಲಾಗಿದೆ.
ಅತೃಪ್ತರಿಗೆ ಬಿಗ್ ಶಾಕ್; ಮತ್ತೆ 14 ಶಾಸಕರು ಅನರ್ಹ
17 ಕ್ಷೇತ್ರಗಳ ಉಪಚುನಾವಣೆ: 69 ವೀಕ್ಷಕರೊಂದಿಗೆ ಕಾಂಗ್ರೆಸ್ ರಣಕಹಳೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ