25ರ ವರೆಗೂ ಡಿ.ಕೆ.ಶಿವಕುಮಾರ ಬಿಡುಗಡೆ ಇಲ್ಲ
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಅಕ್ರಮ ಹಣ ಸಂಗ್ರಹ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ ಇನ್ನೂ 4 ದಿನ ತಿಹಾರ ಜೈಲಿನಲ್ಲೇ ಇರುವುದು ಅನಿವಾರ್ಯವಾಗಿದೆ.
ಅವರು ಸಲ್ಲಿಸಿರುವ ಜಾಮೀನು ಅರ್ಜಿ ಕುರಿತು ಸೆ.25ರಂದು ತೀರ್ಪು ನೀಡುವುದಾಗಿ ನ್ಯಾಯಾಲಯ ಪ್ರಕಟಿಸಿದೆ. ಇಂದು ಜಾಮೀನು ಅರ್ಜಿ ಕುರಿತು ಸುದೀರ್ಘ ವಿಚಾರಣೆ ನಡೆದ ನಂತರ ನ್ಯಾಯಾಧೀಶರು ಜಾಮೀನು ನೀಡಬೇಕೋ ಬೇಡವೋ ಎನ್ನುವ ಕುರಿತು ಸೆ.25ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿದರು.
ಹಾಗಾಗಿ ಡಿ.ಕೆ.ಶಿವಕುಮಾರ ಅವರಿಗೆ ಇಂದು ಜಾಮೀನು ಸಿಗಬಹುದು, ತಿಹಾರ್ ಜೈಲಿನಿಂದ ಹೊರಗೆ ಬರಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇನ್ನೂ 4 ದಿನ ಅವರು ಜೈಲಿನಲ್ಲೇ ಕಳೆಯುವುದು ಅನಿವಾರ್ಯವಾಗಿದೆ.
ಇಂದು ಬೆಳಗ್ಗೆ ಇಡಿ ಪರ ವಕೀಲ ನಟರಾಜ ಬಲವಾಗಿ ವಾದ ಮಂಡಿಸಿ ಯಾವುದೇ ಕಾರಣದಿಂದ ಡಿ.ಕೆ.ಶಿವಕುಮಾರ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಕೋರಿದ್ದರು.
ಅನರ್ಹರಿಗೆ ಶಾಕ್ -ಹಠಾತ್ ಉಪಚುನಾವಣೆ ಘೋಷಣೆ
ಶನಿವಾರದವರೆಗೂ ಡಿ.ಕೆ.ಶಿವಕುಮಾರ ತಿಹಾರ ಜೈಲಲ್ಲೇ
ಡಿ.ಕೆ.ಶಿವಕುಮಾರ ತಿಹಾರ್ ಜೈಲಿಗೆ ಸ್ಥಳಾಂತರ, ಇಂದು ಬಿಡುಗಡೆ ಕಷ್ಟ
ನ್ಯಾಯಾಂಗ ಬಂಧನಕ್ಕೆ ಡಿ.ಕೆ.ಶಿವಕುಮಾರ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ