ಪ್ರಗತಿವಾಹಿನಿ ಸುದ್ದಿ : ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡ ಈ ಪಾದಯಾತ್ರೆ ಮಧ್ಯದಲ್ಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದ್ದಾರೆ.
ಇಂದು ಕೆಂಗೇರಿಯಲ್ಲಿ ಬಿಜೆಪಿ- ಜೆಡಿಎಸ್ ನಾಯಕರ ಪಾದಯಾತ್ರೆ ಕಾರ್ಯಕ್ರಮ ಉದ್ಘಾಟನೆಯ ಬಳಿಕ ಮಾತನಾಡಿ, ಭ್ರಷ್ಟಾಚಾರದಲ್ಲಿ ಸಿಲುಕಿದ ಸಿದ್ದರಾಮಯ್ಯನವರು ಕುಂಟುನೆಪ ಮಾಡದೇ ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಿರ್ಗಮಿಸಲಿ ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಮೈಸೂರು ಚಲೋ ಪಾದಯಾತ್ರೆಗೆ ರಾಜ್ಯದ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಶಕ್ತಿಯಿದೆ. ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ವಚನಭ್ರಷ್ಟವಾಗಿದೆ. ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅಹಿಂದ ವರ್ಗದವರಿಗೆ ಸಾಮಾಜಿಕ ನ್ಯಾಯ ಕೊಡುವುದಾಗಿ ಹೇಳಿದ್ದ ಸಿದ್ದರಾಮಯ್ಯನವರ ಸರ್ಕಾರ ಪರಿಶಿಷ್ಟ ಸಮುದಾಯದ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿಯನ್ನು ಲೂಟಿ ಮಾಡಿದೆ ಎಂದು ಆರೋಪಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ