ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿಯುಂಟಾಗಿದ್ದರೆ, ಇನ್ನು ಹಲವು ಜಿಲ್ಲೆಗಳಲ್ಲಿ ಭೂ ಕುಸಿತ, ಗುಡ್ಡ ಕುಸಿತದಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿವಿಧ ಜಿಲ್ಲೆಗಳ ಮಳೆ ಹಾನಿ ಪ್ರದೇಶಗಳಿಗೆ ಖುದ್ದು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
ಆಗಸ್ಟ್ 5ರಂದು ಸಿಎಂ ಸಿದ್ದರಾಮಯ್ಯ ಬೆಳಗಾವಿ ಜಿಲ್ಲೆಗೆ ಭೇಟಿ ಕೊಡಲಿದ್ದಾರೆ. ಗೋಕಾಕ್ ನ ವಿವಿಧ ಗ್ರಾಮಗಳಲ್ಲಿ ಸಂಭವಿಸಿರುವ ಪ್ರವಾಹ ಪರಿಸ್ಥಿತಿ ಪರಿಶೀಲಿಸಲಿದ್ದು, ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11.10ಕ್ಕೆ ವಿಶೇಷ ವಿಮಾನದಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಸಿಎಂ, 12.15ಕ್ಕೆ ಗೋಕಾಕ ನಗರಕ್ಕೆ ಆಗಮಿಸಿ, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿ, ಕಾಳಜಿ ಕೇಂದ್ರಕ್ಕೂ ಭೇಟಿ ನೀಡುವರು.
ಅಲ್ಲಿಂದ 3.15ಕ್ಕೆ ಕಾಗವಾಡ ತಾಲೂಕಿನ ಜುಗುಳಕ್ಕೆ ಆಗಮಿಸಿ, ವೀಕ್ಷಣೆ ಮಾಡಿ, 3.35ಕ್ಕೆ ಮಾಂಜರಿ ಸೇತುವೆ ವೀಕ್ಷಿಸುವರು. ಅಲ್ಲಿಂದ ರಸ್ತೆ ಮೂಲಕ ಬೆಳಗಾವಿ ಪ್ರವಾಸಿ ಮಂದಿರಕ್ಕೆ 5 ಗಂಟೆಗೆ ಆಗಮಿಸುವರು. 6.30ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿ ಬೆಂಗಳೂರಿಗೆ ಹಿಂತಿರುಗುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ