ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ವಿಶೇಷ ವಿಮಾನದ ಮೂಲಕ ಮುಖ್ಯಮಂತ್ರಿಗಳ ಜೊತೆಗೆ ಬೆಂಗಳೂರಿನಿಂದ ಹೊರಟು, 11.10ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಕೆಲವು ಸಚಿವರು ಸಹ ಸಿಎಂ ಜೊತೆ ಪ್ರಯಾಣಿಸಲಿದ್ದಾರೆ.
ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಹ ಆಗಮಿಸಲಿದ್ದು, ಅವರು ಈ ಹಿಂದೆ ಬೆಳಗಾವಿ ಜಿಲ್ಲಾಧಿಕಾರಿಗಳಾಗಿ ಕೆಲಸ ನಿರ್ವಹಿಸಿ ಜನಪ್ರಿಯತೆ ಗಳಿಸಿದ್ದರು.
ಮಧ್ಯಾಹ್ನ 12.15ರಿಂದ ಸಂಜೆ 6.30ರ ವರೆಗೆ ಜಿಲ್ಲೆಯ ಗೋಕಾಕ, ಕಾಗವಾಡ ಹಾಗೂ ಚಿಕ್ಕೋಡಿ ತಾಲೂಕುಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿಗಳು ಸಮೀಕ್ಷೆ ನಡೆಸಲಿದ್ದಾರೆ. ಗೋಕಾಕದಲ್ಲಿ ಕಾಳಜಿ ಕೇಂದ್ರಕ್ಕೂ ಭೇಟಿ ನೀಡುವರು. ಚಿಕ್ಕೋಡಿ ತಾಲೂಕಿನ ಮಾಂಜರಿ ಸೇತುವೆ ಪರಿಶೀಲಿಸುವರು.
ಸಂಜೆ 6.40ಕ್ಕೆ ಸಿಎಂ ಜೊತೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ವಾಪಸ್ ಪ್ರಯಾಣ ಬೆಳೆಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ