Kannada NewsKarnataka NewsNationalPolitics

*ಮೆಟ್ರೋದಲ್ಲಿ ಪ್ರಯಾಣಿಸಿ ಖುಷಿ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೆಗೌಡಾ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಇತ್ತೀಚೆಗೆ ನವದೆಹಲಿಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸಂಗ್ರಹಾಲಯಕ್ಕೆ ಭೇಟಿ ನೀಡಿದ್ದರು. ಇದೀಗ ದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. 

ಇದರ ವಿಡಿಯೋವನ್ನು ತಮ್ಮ ಟ್ವಿಟರ್ ​ಮೂಲಕ ಹಂಚಿಕೊಂಡಿರುವ ಅವರು, ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ. ನನ್ನ ಸಂಪುಟದಲ್ಲಿ ಮತ್ತು ಪ್ರತಿಪಕ್ಷಗಳ ಪ್ರತಿರೋಧದ ನಡುವೆಯೂ ನಾನು 1996ರಲ್ಲಿ ಪ್ರಧಾನಿಯಾಗಿದ್ದಾಗ ಈ ಯೋಜನೆಗೆ ಆರ್ಥಿಕ ಅನುಮೋದನೆ ನೀಡಿದ್ದೆ. ಇದು ಜನರಿಗೆ ಸಹಾಯವಾಗಿದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button