Kannada NewsKarnataka NewsNationalPolitics

*ಪಿಎಸ್‌ಐ ಪರಶುರಾಮ ಸಾವಿನ ಪ್ರಕರಣ:  ಮಹತ್ವದ ದಾಖಲೆ ವಶಕ್ಕೆ ಪಡೆದ ಸಿಐಡಿ*

ಪ್ರಗತಿವಾಹಿನಿ ಸುದ್ದಿ: ಕಳೆದ ಏಳು ತಿಂಗಳಿನಿಂದ ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್ ಅವರು ಏಕಾಏಕಿ ವರ್ಗಾವಣೆಯ ಆದೇಶ ನೀಡಿದ ಬೆನ್ನಲ್ಲೇ ಸಾವನ್ನಪ್ಪಿದ್ದರು. ಪಿಎಸ್‌ಐ ಪತ್ನಿ ನೀಡಿದ ದೂರಿನ ಮೇರೆಗೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ ಹಾಗೂ ಅವರ ಪುತ್ರ ಪಂಪಣ್ಣಗೌಡ ಮೇಲೆ ಪ್ರಕರಣ ದಾಖಲಾಗಿದೆ. 

ಈ ಪ್ರಕರಣ ಈಗ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಕೂಡ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವ ಮೂಲಕ ಮೃತ ಪಿಎಸ್‌ಐ ಪರಶುರಾಮ್ ಸಾವಿನ ತನಿಖೆ ನಡೆಸಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ ಸಿಐಡಿ ಪೋಲಿಸ್‌ ಡಿವೈಎಸ್‌ಪಿ ಪುನೀತ್ ಹಾಗೂ ಅಧಿಕಾರಿಗಳ ನೇತೃತ್ವದ ತಂಡ ಮೊದಲಿಗೆ ಯಾದಗಿರಿ ಡಿವೈಎಸ್‌ಪಿ ಬಸವೇಶ್ವರ ಹಾಗೂ ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ಹಣಮಂತ ಬಂಕಲಗಿ ಅವರನ್ನು ವಿಚಾರಣೆ ನಡೆಸಿದರು. ಪಿಎಸ್‌ಐ ಪರಶುರಾಮ್ ಸಾವಿನ ಹಿನ್ನೆಲೆಯಲ್ಲಿ ಪ್ರಕರಣದ ಎಲ್ಲಾ ದಾಖಲೆಗಳನ್ನು ಹಾಗೂ ಪೆನ್‌ಡ್ರೈವ್ ಹೀಗೆ ಮಹತ್ವದ ದಾಖಲೆಗಳನ್ನು ಬೆಂಗಳೂರಿನ ಸಿಐಡಿ ತಂಡ ತೆಗೆದುಕೊಂಡು ತನಿಖೆ ಆರಂಭಿಸಿದೆ. ಪ್ರಕರಣದಲ್ಲಿ ಫೋನ್ ಸಂಭಾಷಣೆಯಲ್ಲಿ ನಡೆದ ವರ್ಗಾವಣೆಯ ಬಗ್ಗೆ ಫೋನ್ ಕಾಲ್ ಪರಿಶೀಲನೆ, ಪತ್ನಿ ಹಾಗೂ ಸಹಚರರ ಹೇಳಿಕೆ ಹೀಗೆ ಎಲ್ಲಾ ಆಯಾಮಗಳಲ್ಲಿ ಪ್ರಕರಣದ ಜಾಡು ಹಿಡಿದು ಹೊರಟಿದೆ. ನೊಂದ ಕುಟುಂಬಕ್ಕೆ ನ್ಯಾಯ ಸಿಗುತ್ತಾ ಕಾದು ನೋಡಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button