ಪ್ರಗತಿವಾಹಿನಿ ಸುದ್ದಿ: ಒಂದೆಡೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆ ನಡೆಯುತ್ತಿದೆ. ಮತ್ತೊಂದೆಡೆ ಮಂಡ್ಯದಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಫ್ಲೆಕ್ಸ್ ಗಳಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ಹೊರವಲಯದ ಉಮ್ಮಡಹಳ್ಳಿ ಸಮೀಪ ಬೈಸೂರು-ಬೆಂಗಳೂರು ಹೆದ್ದಾರಿ ಅಂದರ್ ಪಾಸ್ ನಲ್ಲಿದ್ದ ಪ್ರೀತಂಗೌಡ ಫ್ಲೆಕ್ಸ್ ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.
ಬಿಜೆಪಿ-ಜೆಡಿಎಸ್ ನಾಯಕರನ್ನು ಸ್ವಾಗತಿಸಲು ಫ್ಲೆಕ್ಸ್ ಗಳನ್ನು ಅಳವಡಿಸಲಾಗಿತ್ತು. ಫ್ಲೆಕ್ಸ್ ಗಳಲ್ಲಿ ಪ್ರೀತಂ ಗೌಡ ಭಾವಚಿತ್ರವಿರುವುದಕ್ಕೆ ಬೆಂಕಿ ಹಚ್ಚಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ