*ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ*
ಪ್ರಗತಿವಾಹಿನಿ ಸುದ್ದಿ : ಸಿಪಿಎಂ ಮುಖಂಡ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (80) ಅವರು ವಯೋ ಸಹಜ ಕಾಯಿಲೆಯಿಂದ ಇಂದು ನಿಧನರಾದರು.
ವಯೋ ಸಹಜ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಬೆಳಗ್ಗೆ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಹಾಗೂ
ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇವರು 2000ರಿಂದ 2011ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಆಗಿದ್ದರು. 2011ರಲ್ಲಿ ಭಟ್ಟಾಚಾರ್ಯ ನೇತೃತ್ವದ ಸಿಪಿಐ(ಎಂ) ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡಿತು. ಈ ಮೂಲಕ ಎಡರಂಗದ 34 ವರ್ಷಗಳ ಆಡಳಿತ ಕೊನೆಗೊಂಡಿತು. ಆಗ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿಯಿತು.ಭಟ್ಟಾಚಾರ್ಯ ಅವರು 2015ರಲ್ಲಿ ಸಿಪಿಐ (ಎಂ) ಪಾಲೀಟ್ ಬ್ಯೂರೊ ಮತ್ತು ಕೇಂದ್ರ ಸಮಿತಿಯಿಂದ ಕೆಳಗಿಳಿದರು. 2018ರಲ್ಲಿ ಪಕ್ಷದ ರಾಜ್ಯ ಸಚಿವಾಲಯದ ಸದಸ್ಯತ್ವವನ್ನು ತೊರೆದರು. ನಂತರದ ದಿನಗಳಲ್ಲಿ ಅವರು ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ