ಪ್ರವತಿವಾಹಿನಿ ಸುದ್ದಿ: ಶೇಖ್ ಹಸೀನಾ ಪದಚ್ಯುತಿಯ ನಂತರ ಬಾಂಗ್ಲಾದಲ್ಲಿ ಆರ್ಥಿಕ ತಜ್ಞ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಯೂನಸ್ ಪದಗ್ರಹಣ ಮಾಡಿದ್ದು, ಸಂವಿಧಾನವನ್ನು ರಕ್ಷಿಸಿ ಬೆಂಬಲಿಸುವುದಾಗಿ ಯೂನಸ್ ಪದಗ್ರಹಣದಲ್ಲಿ ಶಪಥ ಸ್ವೀಕರಿಸಿದರು.
ಬಾಂಗ್ಲಾ ಸ್ವಾತಂತ್ರ್ಯ ಹೋರಾಟಗಾರರ ಮಕ್ಕಳು ಮೊಮ್ಮಕ್ಕಳಿಗೆ ಮೀಸಲಾತಿ ಘೋಷಿಸಿದ್ದ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ಬಾಂಗ್ಲಾದಲ್ಲಿ ನಡೆಸಿದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡು ಹಿಂಸಾಚಾರಕ್ಕೆ ತಿರುಗಿ, ಶೇಖ್ ಹಸೀನಾ ಸೋಮವಾರದಂದು ರಾಜೀನಾಮೆ ನೀಡಬೇಕಾಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ