ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ತೀವ್ರಗೊಳ್ಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮುಡಾ ನಿವೇಶನ ವಿಚಾರವಾಗಿ ನ್ಯಾಯಾಂಗ ತನಿಖೆ ನಡೆಯುತ್ತಿದೆ. ತನಿಖೆ ನಡೆದು ವರದಿ ಬರುವವರೆಗೂ ಮುಡಾದ ನಿವೇಶನಗಳು ನಮ್ಮದಲ್ಲ ಎಂದು ತಿಳಿಸಿದ್ದಾರೆ.
ಈಗಾಗಲೇ 2005ರಿಂದ ಯಾರಿಗೆಲ್ಲ ಮುಡಾ ನಿವೇಶನ ಹಂಚಿಕೆಯಾಗಿದೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಹಾಗಾಗಿ ಈ ಅವಧಿಯಲ್ಲಿನ ಸೈಟ್ ಗಳು ರದ್ದಾಗಿವೆ. ಅದರ ಅರ್ಥ ನಮಗೆ ಕೊಟ್ಟ ನಿವೇಶನವೂ ರದ್ದಾಗಿದೆ. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ. ನ್ಯಾಯಾಂಗ ತನಿಖೆ ನಡೆದು ವರದಿ ಬರಲಿ. ಅಲ್ಲಿಯವರೆಗೂ ನಿವೇಶನಗಳು ನಮ್ಮದಲ್ಲ. ತನಿಖೆ ನಡೆಸಿ ನಿವೇಶನ ನಮ್ಮದು ಎಂದರೆ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ನ್ಯಾಯಾಲಯದ ಮೊರೆ ಹೋಗುತ್ತೇವೆ ಎಂದು ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ